ಬೆಂಗಳೂರು : ಮೇ 07 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಚುನಾವಣಾ ಕಾರ್ಯಕ್ಕೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದ್ದು, ಮೇ 06(ಸೋಮವಾರ) ಮತ್ತು ಮೇ 07 (ಮಂಗಳವಾರ) ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಚುನಾವಣಾ ಆಯೋಗವು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಬುಕ್ ಮಾಡಿಕೊಂಡಿದ್ದು, ಸರ್ಕಾರಿ ಬಸ್ ಗಳಿಗೆ ಕಿ.ಮೀ. 57 ರೂ. ದರ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ.

ಮೇ.7 ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Share.
Exit mobile version