ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಮಾರ್ಚ್ 15 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡ ಸೇರಿ ರಾಜ್ಯದ ಐದು ಕಡೆ ಪ್ರಚಾರ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಘೋಷಣೆಯಾದ ಬಳಿಕ ರಾಜ್ಯದಲ್ಲಿ ಮಾರ್ಚ್ 15 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಚ್ 15 ರಂದು ಚಿಕ್ಕಬಳ್ಳಾಪುರಕ್ಕೆ ಆಗಮಿಸುವ ಪ್ರಧಾನಿ ಮೋದಿ ಅವರು ಪರಚಾರಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್ 16 ಕಲಬುರಿಯಲ್ಲಿ ಪ್ರಧಾನಿ ಮೋದಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದು, ಬಳಿಕ ಮಾ. 17 ರಂದು ಶಿವಮೊಗ್ಗದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.