ಬೆಂಗಳೂರು:ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಬೆಂಗಳೂರು ಲೋಕಸಭಾ ಕ್ಷೇತ್ರಕ್ಕೆ ಏ. 26 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ವ್ಯವಹಾರಿಕ ಕಾರ್ಖಾನೆ ಸಂಸ್ಥೆಗಳು, ಔದ್ಯಾಮಿಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನ ಮಾಡಲು 1951ರ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆಯನ್ವಯ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಮಾಲೀಕರು ಮತದಾನ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.