ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಪ್ರಚಾರದಲ್ಲಿ ತೊಡಗಿದೆ. ನಾಳೆ ಮಂಡ್ಯ, ಕೋಲಾರದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ರಣಕಹಳೆಯನ್ನು ಮೊಳಗಿಸಲಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ವಿಚಾರವಾಗಿ ಕೇಳಿದಾಗ, “ರಾಹುಲ್ ಗಾಂಧಿ ಅವರು ನಾಳೆ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದರು.
ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
‘ನಟ ದ್ವಾರಕೀಶ್’ ನಿಧನ ಹಿನ್ನಲೆ: ನಾಳೆ ‘ಕನ್ನಡ ಚಿತ್ರರಂಗ ಬಂದ್’ ಮಾಡಿ ಸಂತಾಪ
BREAKING : ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ : ಜೆಸಿಬಿಗೆ ಆಟೋ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು