ವಯನಾಡ್ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 3ರ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಇದಕ್ಕೂ ಮುನ್ನ ರಾಹುಲ್ ಗಾಂಧಿ ಈ ಪ್ರದೇಶದಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಿಶೇಷವೆಂದರೆ, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸುಮಾರು 5 ಲಕ್ಷ ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದ್ದರು.
ಈ ಬಾರಿ ವಯನಾಡ್ ರಾಹುಲ್ ಗಾಂಧಿಗೆ ಸುಲಭವಲ್ಲ. ಈ ಚುನಾವಣೆಯಲ್ಲಿ ರಾಹುಲ್ ವಿರುದ್ಧ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಅನ್ನಿ ರಾಜಾ ಇದ್ದಾರೆ. ಪಕ್ಷವು ಅವರನ್ನು ವಯನಾಡ್ ನಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಬಿಜೆಪಿಯಿಂದ ರಾಹುಲ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಕಣಕ್ಕಿಳಿಯಲಿದ್ದಾರೆ. ಈ ಮೂವರು ಪ್ರಬಲ ನಾಯಕರಾಗಿದ್ದು, ಈ ಕ್ಷೇತ್ರದಲ್ಲಿ ಕಠಿಣ ಸ್ಪರ್ಧೆ ನಡೆಯಲಿದೆ ಎಂದು ನಂಬಲಾಗಿದೆ.