ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಆದೇಶಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಗಳನ್ನು ಭಾರತ ಚುನಾವಣಾ ಆಯೋಗವು ದಿನಾಂಕ: 16.03.2024, ಶನಿವಾರದಂದು ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ಅಂದಿನಿಂದಲೇ ಜಾರಿಗೆ ಬಂದಿರುತ್ತದೆ. ಜಾರಿಯಾಗಿರುವ ಚುನಾವಣಾ ಮಾದರಿ ನೀತಿ ಸಂಹಿತೆಯು ಉಲ್ಲಂಘನೆಯಾಗದಂತೆ ಇಲಾಖೆಗಳು ಜಾಗ್ರತೆ ವಹಿಸುವುದು ಅವಶ್ಯವಾಗಿರುತ್ತದೆ. ಮಾದರಿ ನೀತಿ ಸಂಹಿತೆ ವಿನಾಯಿತಿ ಬೇಕಾದ ಪ್ರಸ್ತಾವನೆಗಳಿಗೆ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ (Screening Committee)ಯನ್ನು ರಚಿಸಲಾಗಿದೆ.
ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾದರಿ ನೀತಿ ಸಂಹಿತೆ ಕುರಿತಾದ ಸೂಚನೆಗಳನ್ನು ಆಡಳಿತ ಇಲಾಖೆಗಳು ಗಮನದಲ್ಲಿಟ್ಟುಕೊಂಡು, ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾಗಿರುವ ತುರ್ತು ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಪರಿಶೀಲನಾ ಸಮಿತಿಗೆ ಸಂಬಂಧಿಸಿದ ಆಡಳಿತ ಇಲಾಖೆಗಳು ಕಳುಹಿಸುವುದು.
ಸರ್ಕಾರದ ಸಮಿತಿಗೆ ನಿಗಮಗಳು/ ಮಂಡಳಿಗಳು/ ನಿರ್ದೇಶನಾಲಯಗಳು ಸಂಬಂಧಿಸಿದ ಆಡಳಿತ ಇಲಾಖೆಗೆ ಪ್ರಸ್ತಾವನೆ ಕಳುಹಿಸುವುದು. ಆಡಳಿತ ಇಲಾಖೆಗಳು ಅವುಗಳನ್ನು ಪರಿಶೀಲಿಸಿ, ಮಾದರಿ ನೀತಿ ಸಂಹಿತೆ ಸಡಿಲಿಸುವ ತುರ್ತು ಅಗತ್ಯತೆ ಇದ್ದಲ್ಲಿ ಮಾತ್ರ ಅಂತಹ ಪ್ರಸ್ತಾವನೆಗಳನ್ನು ಪರಿಶೀಲನಾ ಕಳುಹಿಸುವುದು. ಆಡಳಿತ ಇಲಾಖೆಗಳು ಪ್ರಸ್ತಾವನೆಗಳನ್ನು ಆಂಗ್ಲ ಭಾಷೆಯಲ್ಲಿ ಪರಿಶೀಲನಾ ಸಮಿತಿಗೆ ಕಳುಹಿಸುವುದು. ಅದರ Soft Copy ಅನ್ನು cabinetsection@gmail.com ಗೆ ಕಳುಹಿಸುವಂತೆ ತಿಳಿಸಲಾಗಿದೆ.
ಲೋಕಸಭಾ ಚುನಾವಣೆ: ಯಾರಿಗೆಲ್ಲ ‘ಅಂಚೆ ಮತದಾನ’ಕ್ಕೆ ಅವಕಾಶ.? ಇಲ್ಲಿದೆ ಡೀಟೆಲ್ಸ್
`EVM’ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾರದರ್ಶಕತೆಗೆ ಸಾಕ್ಷಿಯಾಗಿದೆ : ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್