ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗುತ್ತಿದ್ದಂತೆ, ಸಂಸದೆ ಸುಮಲತಾ ಅಂಬರೀಶ್ ಸಿಡಿದೇಳೋ ಸಾಧ್ಯತೆ ಇದೆ. ಅವರು ಬಂಡಾಯ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ.
ಇದೇ ಕಾರಣಕ್ಕಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಜೆಪಿ ನಗರದ ಸುಮಲತಾ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಚರ್ಚೆ ನಡೆಸಿದ್ದಾರೆ. ದೆಹಲಿಗೆ ತೆರಳಿದ್ದಂತ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರನ್ನು ಭೇಟಿಯಾಗಿದ್ದರು.
ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿ ಬೆಂಗಳೂರಿಗೆ ಹಿಂದಿರುಗಿದಂತ ಅವರನ್ನು ಬಿವೈ ವಿಜಯೇಂದ್ರ ಅವರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಮಂಡ್ಯದಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಪೋರ್ಟ್ ಮಾಡೋದಕ್ಕೆ ಮನವೊಲಿಗೆ ಮಾಡಿದ್ದಾರೆ ಎನ್ನಲಾಗುತ್ತಿದೆ.
BIG NEWS : ಅಶ್ಲೀಲ ಪದಗಳಿಂದ ಸಚಿವ ಶಿವರಾಜ್ ತಂಗಡಗಿಗೆ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ದೂರು ದಾಖಲು
BIG NEWS : ‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ