ನವದೆಹಲಿ: ಭಾರತದ ಚುನಾವಣಾ ಆಯೋಗವು ಮುಂದಿನ ವಾರ ಮಾರ್ಚ್ 14ರಂದೇ ಲೋಕಸಭಾ ಚುನಾವಣೆ 2024 ರ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
2019 ರಲ್ಲಿ ನಡೆದ ಕೊನೆಯ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳೊಂದಿಗೆ ಎರಡನೇ ಬಾರಿಗೆ ಗೆಲುವು ಸಾಧಿಸಿತು. ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಪ್ರಧಾನಿ ಮೋದಿ ಬಿಜೆಪಿಗೆ 370 ಸ್ಥಾನಗಳು ಮತ್ತು ಎನ್ಡಿಎಗೆ 400 ಸ್ಥಾನಗಳನ್ನು ನಿಗದಿಪಡಿಸಿದ್ದರೂ, ಕಾಂಗ್ರೆಸ್ ಕನಿಷ್ಠ 40 ಸ್ಥಾನಗಳನ್ನು ದಾಟಲಿ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ ನೇತೃತ್ವದ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲು ಪಕ್ಷವು ಸಜ್ಜಾಗುತ್ತಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಪ್ಲಬ್ ಕುಮಾರ್ ದೇಬ್ ಅವರನ್ನು ಕಣಕ್ಕಿಳಿಸಿತ್ತು.
ಬಿಜೆಪಿಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರದಂದು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡಿನಿಂದ ಕಣಕ್ಕೆ ಇಳಿಯಲಿದ್ದಾರೆ.
BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ