ನವದೆಹಲಿ:ಉಭಯ ಸದನಗಳ ಸಂಸದರ ಮೈಕ್ರೊಫೋನ್ ಗಳ ಮೇಲೆ ಸ್ಪೀಕರ್ ಗೆ ಯಾವುದೇ ನಿಯಂತ್ರಣವಿಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೈಕ್ರೊಫೋನ್ ಆಫ್ ಆಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ನಂತರ ಬಿರ್ಲಾ ಈ ಹೇಳಿಕೆ ನೀಡಿದ್ದಾರೆ.

ಸಂಸದರನ್ನುದ್ದೇಶಿಸಿ ಮಾತನಾಡಿದ ಲೋಕಸಭಾ ಸ್ಪೀಕರ್, “ಸದನದ ಹೊರಗೆ, ಕೆಲವು ಸಂಸದರು ಸ್ಪೀಕರ್ ಮೈಕ್ ಸ್ವಿಚ್ ಆಫ್ ಮಾಡುತ್ತಾರೆ ಎಂದು ಆರೋಪಿಸುತ್ತಾರೆ. ಮೈಕ್ ನ ನಿಯಂತ್ರಣವು ಕುರ್ಚಿಯ ಮೇಲೆ ಕುಳಿತವರ ಕೈಯಲ್ಲಿಲ್ಲ.” ಎಂದರು.

ಏತನ್ಮಧ್ಯೆ, ಪೂರ್ವ ವೈದ್ಯಕೀಯ ಪ್ರವೇಶ ಪರೀಕ್ಷೆ, ನೀಟ್ ವಿಷಯದ ಬಗ್ಗೆ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಸಭಾತ್ಯಾಗ ಮಾಡಿದವು. ಕೇಂದ್ರದ ಭರವಸೆಯ ಹೊರತಾಗಿಯೂ ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಿಂದ ಹೊರನಡೆದರು.

 ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಸೇರಿದಂತೆ ಕೇಂದ್ರ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳ ಸದಸ್ಯರು ಸೋಮವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು

Share.
Exit mobile version