ಕಲಬುರಗಿ: ಜಿಲ್ಲೆಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ.

BIGG NEWS: ಬಿಜೆಪಿ-ಜೆಡಿಎಸ್‌ ಮಧ್ಯೆ BMS ಜಪಾಪಟಿ; ಸ್ಪೀಕರ್ ನೇತೃತ್ವದಲ್ಲಿ ಸಂಧಾನ ಸಭೆ

 

ಜೇವರ್ಗಿ ಠಾಣೆ ಇನ್ಸ್​ಪೆಕ್ಟರ್ ಹಾಗೂ ಇಬ್ಬರು ಕಾನ್ಸ್​ಟೇಬಲ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇನ್ಸ್​ಪೆಕ್ಟರ್ ಶಿವಪ್ರಸಾದ ಮಠದ, ಜೇವರ್ಗಿ ಎಸ್​​ಪಿ ಬೀಟ್ ಕಾನ್ಸ್​ಟೇಬಲ್ ಶಿವರಾಯ ಅರಳಗುಂಡಗಿ ಹಾಗೂ ಪಿಐ ವಾಹನ ಚಾಲಕ ಅವಣ್ಣ ಲೋಕಾಯುಕ್ತರ ಬಲೆಗೆ ಬಿದ್ದವರು. ಶಹಾಪುರದ ಮರಳು ವ್ಯಾಪಾರಿ ಅಖಿಲ್ ಎಂಬುವರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ.

BIGG NEWS: ಬಿಜೆಪಿ-ಜೆಡಿಎಸ್‌ ಮಧ್ಯೆ BMS ಜಪಾಪಟಿ; ಸ್ಪೀಕರ್ ನೇತೃತ್ವದಲ್ಲಿ ಸಂಧಾನ ಸಭೆ

ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.

Share.
Exit mobile version