ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಗಳ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಅಂಥ ತಿಳಿದು ಬಂದಿದೆ.
ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇದಲ್ಲದೇ ಬಿಬಿಎಂಪಿ ಮುಖ್ಯ ಇಂಜಿನಿಯರ್ ರಂಗನಾಥ್ ಎಸ್ಪಿ, ಅಬಕಾರಿ ಇಲಾಖೆಯ ಉಪ ಆಯುಕ್ತರಾದ ರೂಪ, ರಾಮನಗರ ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯತೀಶ್ ಸೇರಿದಂತೆ ಹಲವು ಅಧಿಕಾರಿಗಳ ನಿವಾಸಿಗಳ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
130 ತನಿಖಾಧಿಕಾರಿಗಳು ಏಕಕಾಲದಲ್ಲಿ 60 ಸ್ಥಳಗಳಲ್ಲಿ ದಾಳಿ ಮಾಡುತ್ತಿದ್ದಾರೆ. 13 ಎಸ್ಪಿಗಳು, 12 ಡಿಎಸ್ಪಿಗಳು, 25 ಪೊಲೀಸ್ ಇನ್ಸ್ಪೆಕ್ಟರ್ಗಳು ಮತ್ತು 80 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರೆ. ಈಗಲ್ಟನ್ ರೆಸಾರ್ಟ್ನಲ್ಲಿ ಪಿಡಿಓ ಯತೀಶ್ನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.