ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು ವಿಚಾರವಾಗಿ ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನಾಳೆ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಹೌದು ನಾಳೆ ಬೆಳಿಗ್ಗೆ 7:30 ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ವಾಟ್ಸಪ್ ಮೂಲಕ ಪೊಲೀಸರು ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ನಾಳೆ ಸ್ನೇಹಮಯಿ ಕೃಷ್ಣ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಗೆ ಹಾಜರಾಗಲಿದ್ದಾರೆ.
ಮುಡಾ ಹಗರಣವನ್ನು ಬಯಲಿಗೆ ಎಳೆದಿದ್ದ ಸ್ನೇಹಮಯಿ ಕೃಷ್ಣ, ಟೀ ಕುಡಿತಂತೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಲೋಕಾಯುಕ್ತ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ ಎಂದು ಇಡಿಗೂ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಇಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಇಸಿಐಆರ್ ದಾಖಲಿಸಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ತಂದಿದೆ.