ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿದೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಚುರುಕುಗೊಳಿಸಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಮೂಲಕ ಮರು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಶುರು ಮಾಡಿದ್ದಾರೆ.
ಇನ್ನೂ ಸಿಬಿಐಯಿಂದ ಲೋಕಾಯುಕ್ತ ಪೊಲೀಸರಿಗೆ ಈವರೆಗೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಯಾವುದೇ ದಾಖಲೆಗಳನ್ನು ಸಲ್ಲಿಸಲಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮರು ತನಿಖೆ ನಡೆಸೋದಕ್ಕೆ ಈಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
BIG NEWS: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 DYSP, 51 PI’ ವರ್ಗಾವಣೆ
ನಾಯಕರ ಭಾವಚಿತ್ರ ಹಾಕದೆ ತಾರತಮ್ಯ ಆರೋಪ: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಕೈ ಕಾರ್ಯಕರ್ತರ ಮಾರಾಮಾರಿ