ಮೈಸೂರು: ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ನಗರದ ಏಳು ಕಡೆ ದಾಳಿ ನಡೆಸಿದ್ದಾರೆ. ಸಣ್ಣ ನೀರಾವರಿ ಇಲಾಖೆ ಜೆಇ ರಫೀಕ್ ಮನೆ ಹಾಗೂ ಸಂಬಂಧಿಕರ ಮನೆ ಸೇರಿದಂತೆ ಕೆಲವೆಡೆ ಕೂಡ ದಾಳಿ ನಡೆಸಿದ್ದಾರೆ.
BIGG NEWS: ಪುನೀತ್ ಪರ್ವಕ್ಕೆ ಬರುವವರಿಗೆ ಮಾರ್ಗ ಬದಲಾವಣೆ; ಟ್ರಾಫಿಕ್ ನಿರ್ವಹಣೆಗೆ ಪೊಲೀಸರ ಸಿದ್ಧತೆ
ಮಡಿಕೇರಿಯ ಸಣ್ಣ ನೀರಾವರಿ ಇಲಾಖೆಯ ಜೆಇ ರಫೀಕ್ ಮನೆ ಸೇರಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಜೊತೆಗೆ ಮಡಿಕೇರಿ ಪಿಡಬ್ಲ್ಯೂಡಿ ಇಇ ನಾಗರಾಜ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿರುವ ನಾಗರಾಜು ಅವರ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
BIGG NEWS: ಪುನೀತ್ ಪರ್ವಕ್ಕೆ ಬರುವವರಿಗೆ ಮಾರ್ಗ ಬದಲಾವಣೆ; ಟ್ರಾಫಿಕ್ ನಿರ್ವಹಣೆಗೆ ಪೊಲೀಸರ ಸಿದ್ಧತೆ
ಇನ್ನೊಂದೆಡೆ ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ನಿವಾಸದ ಮೇಲೆ ಕೂಡ ಲೋಕಾಯುಕ್ತರ ದಾಳಿ ನಡೆದಿದೆ. ಇವರು ಇಂಟೆಲಿಜೆನ್ಸ್ ವಿಭಾಗಕ್ಕೆ ವರ್ಗಾವಾದರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಮೈಸೂರು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದ ತಂಡದಿಂದ ಏಳು ಕಡೆಗಳಲ್ಲಿ ದಾಳಿ ನಡೆದಿದೆ.