ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಬಿಬಿಎಂಪಿಯ ಜಂಟಿ ಆಯುಕ್ತರ ಕಚೇರಿಯ (BBMP Joint Commissioner’s Office ) ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ ಬಿಬಿಎಂಪಿಯ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿರೋದಾಗಿ ತಿಳಿದು ಬಂದಿದೆ. ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಅವರ ಆಪ್ತ ಸಹಾಯಕ 4 ಲಕ್ಷ ರೂ. ಹಣದ ಸಮೇತ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.

ಹೈಕೋರ್ಟ್ ಎಸಿಬಿ ರದ್ದುಗೊಳಿಸಿ ( ACB Cancel ), ಲೋಕಾಯುಕ್ತಕ್ಕೆ ( Karnataka Lokayukta ) ಅಧಿಕಾರ ನೀಡಲಾಗಿತ್ತು. ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಎಸಿಬಿ ರದ್ದುಗೊಳಿಸಿ, ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಲೋಕಾಯುಕ್ತ ಕಾರ್ಯಾಚರಣೆ ಚುರುಕುಗೊಂಡಿದೆ. ಇಂದು ಬೆಂಗಳೂರಿನ ಬಿಬಿಎಂಪಿ ( BBMP ) ಜಂಟಿ ಆಯುಕ್ತರ ಕಚೇರಿ ಮೇಲೆ ದಾಳಿ ನಡೆಸಿತ್ತು. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರ ಶ್ರೀನಿವಾಸ್ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 8 ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನು ನಡೆಸಲಾಗಿತ್ತು.

ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ವಿರುದ್ಧ ಖಾತೆ ಬದಲಾವಣೆ ಸಂಬಂಧ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿಯೇ ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಿತ್ತು.

ಒಟ್ಟು 8 ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಬೆಂಗಳೂರು ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ಲೋಕಾಯುಕ್ತ ಅಧಿಕಾರಿಗಳು ತೊಡಗಿದ್ದರು. ಈ ಬೆನ್ನಲ್ಲೆ ಮಲ್ಲೇಶ್ವರಂನಲ್ಲಿರುವಂತ ಬಿಬಿಎಂಪಿಯ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಅವರ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

Share.
Exit mobile version