ಬೆಂಗಳೂರು: ರಾಜ್ಯದ ಹಲವು ಕಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ನಿದ್ದೆಯಲ್ಲಿದ್ದವರಿಗೆ ಲೋಕಾ ಅಧಿಕಾರಿಗಳು ಬೆಚ್ಚಿ ಬೀಳಿಸಿದ್ದಾರೆ.
ಬೆಂಗಳೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಮಂಗಳೂರು, ವಿಜಯನಗರ, ಕೊಪ್ಪಳ, ಮೈಸೂರು, ಚಾಮರಾಜನಗರ, ಸೇರಿದಂತೆ ಒಟ್ಟು 10 ಜಿಲ್ಲೆಗಳ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿ ವೇಳೆಯಲ್ಲಿ ಅಪಾರ ಪ್ರಮಾಣದ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ.
ಮಂಡ್ಯದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಹರ್ಷ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಮಂಡ್ಯ ಜಿಲ್ಲೆಯ ಸಂಬಂಧಿಕರ ಮನೆ, ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ ಅಂತ ತಿಳಿದು ಬಂದಿದೆ.
ತರೀಕೆರೆಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಅವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಡೂರಿನ ನೇತ್ರಾವತಿಯವರ ಮನೆಯಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಹಾಸನದಲ್ಲಿ ಫುಡ್ ಇನ್ಸ್ಪೆಕ್ಟರ್ ಜಗನ್ನಾಥ್ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ.