ಮಂಡ್ಯ: ಭ್ರಷ್ಟ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಬಿಗ್ ಶಾಕ್ ಎನ್ನುವಂತೆ ಮಂಡ್ಯ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಬೆಂಗಳೂರಿನಿಂದ ಬಂದಿರುವ ಇಬ್ಬರು ಡಿವೈಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿ, ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದು ಕಚೇರಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಾರ? ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಹೇಗಿದೆ? ಬರುವಾಗ ಜೇಬಿನಲ್ಲಿ ದುಡ್ಡು ಎಷ್ಟಿತ್ತು?, ಹೋಗಬೇಕಾದ್ರೆ ಎಷ್ಟಿದೆ.? ಮೊಬೈಲ್ ಗೂಗಲ್ ಪೇ, ಫೋನ್ ಪೇ ವಹಿವಾಟಿನ ಬಗ್ಗೆಯೂ ಚೆಕ್ ಮಾಡುತ್ತಿದ್ದಾರೆ.
ಸಾರ್ವಜನಿಕರಿಂದ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ದೂರು, ಅಹವಾಲನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸುತ್ತಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ








