ಚಿತ್ರದುರ್ಗ : ವ್ಯಕ್ತಿಯೊಬ್ಬರಿಂದ ಇಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಂಚಾಯಿತಿ ಪಿಡಿಒ ಹಾಗೂ ಎಸ್ ಡಿ ಎ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಅಂದನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಹಾಗೂ ದ್ವಿತೀಯ ದರ್ಜೆಯ ಸಹಾಯಲ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಡಿಒ ಶಿವಕುಮಾರ್ ಹಾಗೂ ದ್ವಿತೀಯ ದರ್ಜೆ ಸಹಾಯಕ ಸೋನು ಬಂಧಿತರು ಎನ್ನಲಾಗಿದೆ. ಅಧಿಕಾರಿಗಳು 8 ಸಾವಿರ ರೂ ಹಣವನ್ನು ಜಪ್ತಿ ಮಾಡಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಜಿ. ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಲಂಚ ಪಡೆಯುತ್ತಿದ್ದ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ