ಮಡಿಕೇರಿ : ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಂದ್ರಶೇಖರ್, ಚೆಲುವಾಂಬ ಎಂಬ ಅಧಿಕಾರಿಗಳು. ಸಾಲದ ಚೆಕ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. 10 ಸಾವಿರ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ