ಬೆಳಗಾವಿ : ಇತ್ತೀಚಿಗೆ ಮಹಾರಾಷ್ಟ್ರದ ಲೊನಾವಾಲಾ ದುರಂತದಲ್ಲಿ ಮಹಿಳೆ ಮಕ್ಕಳು ಸೇರಿ 6 ಜನರು ನೀರು ಪಾಲಾಗಿದ್ದರು.ಇದರ ಬೆನ್ನಲ್ಲೆ ಇದೀಗ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ.
ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಹೀಗಾಗಿ ಸಹಜವಾಗಿ ಈ ಒಂದು ಸಮಯದಲ್ಲಿ ಫಾಲ್ಸ್ ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರಾಸೆಯಾಗಿದೆ.
ಫಾಲ್ಸ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಫಾಲ್ಸ್ ಮುಖ್ಯ ರಸ್ತೆಗೆ ಮೂವರು ಫಾರೆಸ್ಟ್ ಗಾರ್ಡ್ಗಳು ಕಾವಲು ಕಾಯುತ್ತಿದ್ದಾರೆ. ವೀಕೆಂಡ್ನಲ್ಲಿ ಫಾಲ್ಸ್ ನೋಡಲು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ.