ನವದೆಹಲಿ: ಜಪಾನ್ ನ ನೂತನ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾದ ಸನೆ ಟಕೈಚಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ ಮತ್ತು ಜಪಾನ್ ನಡುವಿನ ಗಾಢವಾದ ಸಂಬಂಧಗಳು ಇಂಡೋ-ಪೆಸಿಫಿಕ್ ಮತ್ತು ಅದರಾಚೆಗಿನ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನಿರ್ಣಾಯಕವಾಗಿವೆ ಎಂದು ಅವರು ಒತ್ತಿ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ “ಜಪಾನ್ ಪ್ರಧಾನಿಯಾಗಿ ಆಯ್ಕೆಯಾದ ಸನೈ ಟಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಇಂಡೋ-ಪೆಸಿಫಿಕ್ ಮತ್ತು ಅದರಾಚೆಗೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನಮ್ಮ ಗಾಢವಾದ ಸಂಬಂಧಗಳು ಅತ್ಯಗತ್ಯವಾಗಿವೆ.”ಎಂದಿದ್ದಾರೆ.
ಪ್ರಧಾನಿ ಸನೆ ತಕೈಚಿ ಅವರ ಆಯ್ಕೆಯ ನಂತರ ವಿಶ್ವ ನಾಯಕರಿಂದ ಶುಭಾಶಯಗಳು ಬರಲು ಪ್ರಾರಂಭಿಸಿವೆ.
ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಜಪಾನ್ ಅನ್ನು ಪ್ರಗತಿ ಮತ್ತು ಅಭಿವೃದ್ಧಿಯತ್ತ ಮುನ್ನಡೆಸುವಲ್ಲಿ ಯಶಸ್ಸನ್ನು ಹಾರೈಸಿದರು.