ಬೆಂಗಳೂರು: ಕೇಂದ್ರ ಸರ್ಕಾರದಿಂದ ಹಿಟ್ ಅಂಡ್ ರನ್ ಕಾಯ್ದೆಯ ವಿರುದ್ಧ ಉತ್ತರ ಭಾರತದಲ್ಲಿ ಲಾರಿ ಮಾಲೀಕರು ರೊಚ್ಚಿಗೆದ್ದಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಲಾರಿ ಮಾಲೀಕರು ಜನವರಿ.17ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಲಾರಿ ಅಸೋಸಿಯೇಷನ್ ಗೌರವಾಧ್ಯಕ್ಷ ಚನ್ನಾರೆಡ್ಡಿ ಅವರು, ಕೇಂದ್ರ ಸರ್ಕಾರದಿಂದ ಹಿಟ್ ಅಂಡ್ ರನ್ ಕಾಯ್ದೆಯನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಲಾರಿ ಮಾಲೀಕರನ್ನು ಜೈಲಿಗಟ್ಟೋ ಕೆಲಸ ಮಾಡುತ್ತಿದೆ ಎಂಬುದಾಗಿ ಕಿಡಿಕಾರಿದರು.
ಹಿಟ್ ಅಂಡ್ ರನ್ ಕೇಸ್ ಗೆ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಳ ಮಾಡಲಾಗುತ್ತಿದೆ. ದಂಡದ ಮೊತ್ತವನ್ನು ಭಾರೀ ಹೆಚ್ಚಳ ಮಾಡಲಾಗುತ್ತಿದೆ. ಇಂತಹ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕದಲ್ಲಿ ಲಾರಿ ಮಾಲೀಕರಿಂದ ಜನವರಿ.17ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸೋದಾಗಿ ತಿಳಿಸಿದರು.
ಅಂದಹಾಗೇ ಕಳೆದ ವಾರ ಉತ್ತರ ಭಾರತದ ಹಲವೆಡೆ ಲಾರಿ ಮಾಲೀಕರು ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧ ಸಿಡಿದೆದ್ದಿದ್ದರು. ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ, ಟೈಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದ ‘ಮಾಜಿ ಪ್ರಧಾನಿ HDD’ಗೆ, ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
‘ಕಾಂಗ್ರೆಸ್’ನಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ‘ಲೋಗೋ, ಟೀಸರ್, ಟ್ಯಾಗ್ ಲೈನ್’ ಅನಾವರಣ