ಕೊಪ್ಪಳ : ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ನೋಡೋಕೆ ನೂಕುನುಗ್ಗಲು ಸಂಭವಿಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳದ ವನಬಳ್ಳಾರಿ ಗ್ರಾಮದ ಮದುವೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದ ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಸಿದ್ದರಾಮಯ್ಯರು ಇಂದು 2:45 ರ ವೇಳೆಗೆ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಂತೆ ಜನರು ಜಮಾಯಿಸಿದ್ದು, ತಾ ಮುಂದು ತಾ ಮುಂದು ಎಂದು ಬಂದ ಸಾವಿರಾರು ಜನರು ಹೆಲಿಪ್ಯಾಡ್ ಗೆ ನುಗ್ಗಿದ್ದಾರೆ. ಈ ವೇಳೆ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
BREAKING NEWS: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಣ: ಈ ಜಾಲವನ್ನು ಸರ್ಕಾರ ಬೇಧಿಸಲಿದೆ – CM ಬೊಮ್ಮಾಯಿ