ಕಲಬುರಗಿ : ಸಿದ್ದರಾಮಯ್ಯ ಸಿಎಂ ಆದ ಮೇಲೆ ಲವ್ ಜಿಹಾದ್ ಹೆಚ್ಚಾಗುತ್ತಿದೆ. ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕಾಂಗ್ರೆಸ್ನ ಹಲ್ಕಟ್ ರಾಜಕಾರಣಕ್ಕೆ ಕಾರ್ಯಕರ್ತರು ಜೀವ ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪಕ್ಷ, ಹಿಂದೂ ಕಾರ್ಯಕರ್ತರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಕಾರ್ಯಕರ್ತರಿಗೆ ಅಪಮಾನ ಆಗದ ರೀತಿಯಲ್ಲಿ ಕೆಲಸ ಮಾಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಕಾರ್ಯಕರ್ತರ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.