ಉತ್ತರ ಪ್ರದೇಶ: ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ಸನಾತನ ಧರ್ಮವನ್ನು ಮುಗಿಸಲು ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಆರೋಪಿಸಿದ್ದಾರೆ ಮತ್ತು ಅದರ ವಿರುದ್ಧ ಅನುಯಾಯಿಗಳು ಒಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ನಿಮಿತ್ತ ಇಲ್ಲಿನ ಮೊಹಮ್ಮದಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʻಭಯೋತ್ಪಾದನೆ ಲವ್ ಜಿಹಾದ್ ರೂಪದಲ್ಲಿ ಹೊಸ ರೂಪ ಪಡೆದುಕೊಂಡಿದೆ. ಭಾರತದಲ್ಲಿ ‘ಸನಾತನ ಧರ್ಮ’ವನ್ನು ಮುಗಿಸಲು ಕೊಳಕು ಸಂಚು ರೂಪಿಸುತ್ತಿದೆ. ಅನುಯಾಯಿಗಳು ಒಗ್ಗೂಡಿ ಈ ಷಡ್ಯಂತ್ರವನ್ನು ವಿಫಲಗೊಳಿಸಬೇಕಾಗಿದೆʼ ಎಂದು ಹೇಳಿದರು.
ಜನಸಂಖ್ಯೆ ನಿಯಂತ್ರಣ ಕಾನೂನುಗಳನ್ನು ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದ ಸಿಂಗ್, ಇಂತಹ ನೀತಿಗಳು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ. ಚೀನಾದಲ್ಲಿ ಪ್ರತಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ ಪ್ರತಿ ನಿಮಿಷಕ್ಕೆ 31 ಶಿಶುಗಳು ಜನಿಸುತ್ತಿವೆ. ಇದರಿಂದಾಗಿ ಇಲ್ಲಿಯವರೆಗೆ ತ್ವರಿತ ವೇಗದಲ್ಲಿ ಅಭಿವೃದ್ಧಿ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಯುಪಿಯಲ್ಲಿ ಘೋರ ದುರಂತ: ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 6 ಮಂದಿ ಸಜೀವ ದಹನ
ಯುಪಿಯಲ್ಲಿ ಘೋರ ದುರಂತ: ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 6 ಮಂದಿ ಸಜೀವ ದಹನ