ಧಾರವಾಡ : ಧಾರವಾಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿಯಾಗಿ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ರಾಯಪುರ ಬಡಾವಣೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಕಾನ್ಸ್ಟೇಬಲ್ ಎನ್.ಎಫ್ ಸಿದ್ದಪ್ಪನವರ (52) ಮೃತರು ಎಂದು ತಿಳಿದುಬಂದಿದೆ. ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನಪ್ಪಿದ್ದಾರೆ. ಮೃತ ಸಿದ್ದಪ್ಪನವರ್ ಕುಂದಗೋಳ ತಾಲೂಕಿನ ಪಶುಪತಿಹಾಳದ ನಿವಾಸಿ. ಊಟ ಮುಗಿಸಿ ಕಚೇರಿಗೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಸಂಬಂಧಿಸಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








