ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಹಿಂದೂ ದೇವಾಲಯದಲ್ಲಿ ದೇವರ ವಿಗ್ರಹವನ್ನು ಧ್ವಂಸ ಮಾಡಿದ ಆರೋಪದ ಮೇಲೆ ತೌಫೀಕ್ ಅಹ್ಮದ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಅಹ್ಮದ್ ಹಣೆಗೆ ತಿಲಕವನ್ನು ಧರಿಸಿ ದೇವಾಲಯದ ಆವರಣ ಪ್ರವೇಶಿಸಿ ‘ಜೈ ಶ್ರೀ ರಾಮ್’ ಎಂದು ಕೂಗುತ್ತಾ ದೇವರ ವಿಗ್ರಹವನ್ನು ಧ್ವಂಸಗೊಳಿಸಿದ್ದಾನೆ.
ವರದಿ ಪ್ರಕಾರ, ಲಕ್ನೋದ ಗೋಮತಿ ದಂಡೆಯಲ್ಲಿರುವ ಲೇಟೆ ಹನುಮಾನ್ ಮಂದಿರದಲ್ಲಿ ಬುಧವಾರ ಈ ಘಟನೆ ನಡೆದಿದೆ. ತೌಫೀಕ್ ಅಹ್ಮದ್ ದೇವಾಲಯಕ್ಕೆ ಪ್ರವೇಶಿಸಿ ಜೈ ಶ್ರೀರಾಮ್ ಎಂದು ಕೂಗಲು ಪ್ರಾರಂಭಿಸಿ ವಿಗ್ರಹಗಳ ಮೇಲೆ ಕಲ್ಲು ಎಸೆದು ಧ್ವಂಸಗೊಳಿಸಿದ್ದಾನೆ. ಅಷ್ಟೇ ಅಲ್ಲದೇ, ದೇವಾಲಯದ ಧ್ವಜವನ್ನು ಸಹ ಹರಿದು ಹಾಕಿದ್ದಾನೆ. ಘಟನೆ ನಂತ್ರ, ಅರ್ಚಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಸ್ಥಾನದಲ್ಲಿದ್ದ ಎರಡು ವಿಗ್ರಹಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಆರೋಪಿಯನ್ನು ಇದೀಗ ಬಂಧಿಸಲಾಗಿದ್ದು, ವಿಚಾರಣೆ ವೇಳೆ, ಆತ ಕುಡಿದ ಮತ್ತಿನಲ್ಲಿ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ
BIG NEWS: 1 ವರ್ಷದ ಮಗುವಾಗಿದ್ದಾಗಲೇ ಆಗಿದ್ದ ಮದುವೆಯನ್ನು 20 ವರ್ಷದ ಬಳಿಕ ವಜಾಗೊಳಿಸಿದ ರಾಜಸ್ಥಾನ ನ್ಯಾಯಾಲಯ!