ಬೆಳಗಾವಿ : ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಹಿನ್ನೆಲೆ ಮಾಲೀಕರುಗಳಿಗೆ ಬೆಳಗಾವಿ ಜಿಲ್ಲೆಯಲ್ಲಿ 10 ಕೋಟಿ ಪರಿಹಾರ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು.
ಇಂದು ಮಾತನಾಡಿದ ಸಚಿವರು ಚರ್ಮಗಂಟು ರೋಗದಿಂದ ರೈತರಿಗೆ ಆಗುವ ಆರ್ಥಿಕ ನಷ್ಟತಪ್ಪಿಸಲು ಬೆಳಗಾವಿ ಜಿಲ್ಲೆಯಲ್ಲಿ 10 ಕೋಟಿ ಪರಿಹಾರ ನೀಡಲಾಗಿದೆ ಎಂದು ಪ್ರಭು ಬಿ.ಚವ್ಹಾಣ್ ತಿಳಿಸಿದರು.ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, 1.75 ಲಕ್ಷಕ್ಕೂ ಮೇಲ್ಪಟ್ಟಜಾನುವಾರುಗಳಲ್ಲಿ ಚೇತರಿಕೆ ಕಂಡು ಬಂದಿದೆ. 21000 ಜಾನುವಾರುಗಳು ಚರ್ಮಗಂಟು ರೋಗದಿಂದ ಮೃತಪಟ್ಟಿವೆ ಎಂದು ಮಾಹಿತಿ ನೀಡಿದ್ದಾರೆ.
ಜಾನುವಾರುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ರೈತರಲ್ಲಿ ಈ ಕುರಿತು ಜಾಗೃತಿ ಮತ್ತು ಅರಿವು ಮೂಡಿಸಲಾಗುತ್ತಿದೆ ಎಂದು ಸಚಿವ ಚವ್ಹಾಣ್ ಹೇಳಿದರು. ರಾಜ್ಯಾದ್ಯಂತ 67 ಲಕ್ಷ ರಾಸುಗಳಿಗೆ ಲಸಿಕೆ ನೀಡಲಾಗಿದ್ದು, ಲಭ್ಯವಿರುವ 23 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದರು.
ಇನ್ನೂ, ರೈತರಿಗೆ ಸಚಿವ ಪ್ರಭು ಚವ್ಹಾಣ್ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಪಾವತಿಸಲಾಗುತ್ತದೆ ಎಂದು ಹೇಳಿದರು. ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಸಚಿವರು ಹಾಲು ಉತ್ಪಾದಕರಿಗೆ 5 ರೂ. ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ. ಶೀಘ್ರವೇ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಹಾಲು ಉತ್ಪಾದಕ ರೈತರಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶೀಘ್ರವೇ 339 ಕೋಟಿ ಬಾಕಿ ಪ್ರೋತ್ಸಾಹಧನ ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
BIGG NEWS : ಸಾರಿಗೆ ನೌಕರರು-ಸಚಿವರ ಸಂಧಾನ ಸಭೆ ವಿಫಲ : ಪ್ರತಿಭಟನೆ ಮುಂದುವರೆಸಲು ನಿರ್ಧಾರ