ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ” ಪ್ರಶಸ್ತಿಯನ್ನು ಗೀತರಚನಕಾರ, ಸಂಗೀತ ನಿರ್ದೇಶಕ ಡಾ.ಹಂಸಲೇಖಗೆ ರಾಜ್ಯ ಸರ್ಕಾರ ನೀಡಿದೆ.
ಈ ಕುರಿತು ರಾಜ್ಯ ಸರ್ಕಾರ 2025-26ನೇ ಸಾಲಿನಲ್ಲಿ ಆಯೋಜಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:04/02/2026ರಂದು ಸಭೆ ಸೇರಿ ರಾಜ್ಯದ ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಲಗತ್ತಿಸುತ್ತಾ, ಈ ಪೈಕಿ ಒಬ್ಬರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ರಿಜಿಸ್ಟ್ರಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು ಇವರು ಕೋರಿರುತ್ತಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ರಾಜ್ಯದ ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ “ಡಾ.ಹಂಸಲೇಖ, ಗೀತ ರಚನೆಕಾರರು ಹಾಗೂ ಸಂಗೀತ ನಿರ್ದೇಶಕರು ಇವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.









