ಬೆಂಗಳೂರು: ಬೆಂಗಳೂರು ವಿವಿಯಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರು ವಿವಿಯಲ್ಲಿ ದ್ವಿತೀಯ ವರ್ಷದ ಎಂಎ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಪಾವನ ಎಂಬುವರು ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಅಂದಹಾಗೆ ಮೈಸೂರಿನ ಹೆಚ್.ಡಿ ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮ ಪಾವನ, ಬೆಂಗಳೂರು ವಿವಿಯಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ಶರಣಾಗಿದ್ದಾರೆ. ಸ್ಥಳಕ್ಕೆ ಆಗಮಿಸಿರುವಂತ ಜ್ಞಾನಭಾರತಿ ಠಾಣೆಯ ಪೊಲೀಸರು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BREAKING : ‘ಮಹಾ ಕುಂಭಮೇಳ’ದಲ್ಲಿ ಕಾಲ್ತುಳಿತ ದುರದೃಷ್ಟಕರ ಅಪಘಾತ : `PIL’ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ.!