ಬಳ್ಳಾರಿ: ಬಳ್ಳಾರಿಯಲ್ಲಿ ರಾತ್ರಿ ಮನೆ ಮುಂದೆ ಮಲಗಿದ್ದವರ ಮೇಲೆ ಹುಚ್ಚುನಾಯಿ ದಾಳಿ ಮಾಡಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಬಳ್ಳಾರಿಯ ಕೌಲ್ ಬಜಾರ್ ವ್ಯಾಪ್ತಿಯ ವಾರ್ಡ್ ನಂಬರ್ 30 ರಲ್ಲಿ ವಟ್ಟಲಗೇರಿ ಏರಿಯಾದಲ್ಲಿ ನಾಯಿ ದಾಳಿ ಮಾಡಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹುಚ್ಚು ನಾಯಿ ದಾಳಿ ಮಾಡಿದ್ದು, 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಮನೆ ಮುಂದೆ ರಾತ್ರಿ ಮಲಗಿದ್ದ ಜನರ ಮೇಲೆ ನಾಯಿ ದಾಳಿ ಮಾಡಿದ್ದು, 6 ಮಹಿಳೆಯರು 7 ಮಕ್ಕಳು ಸೇರಿದಂತೆ ಒಟ್ಟು 25 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಡಿತದ ಬಳಿಕ ಬಳ್ಳಾರಿ ಜಿಲ್ಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನಾಯಿ ದಾಳಿಗೊಳಗಾದ ಜನರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಚಳಿಗಾಲದಲ್ಲಿ ಒಡೆದ ತುಟಿಗಳು ನಿಮ್ಮನ್ನು ಕಾಡುತ್ತವೆಯೇ? ಈ ಸರಳ ಟಿಪ್ಸ್ ಇಲ್ಲಿದೆ
BREAKING NEWS: ಬಿಎಂಎಸ್ ಅಕ್ರಮ: ‘ಸಚಿವ ಅಶ್ವತ್ಥನಾರಾಯಣ ಪೋಟೋ’ ರಿಲೀಸ್ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ