ದಾವಣಗೆರೆ: ಕೆಎಸ್ ಡಿಎಲ್ ಹಗರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಉಚ್ಚಾಟಿತಗೊಂಡಿದ್ದರು. ಇಂತಹ ಮಾಡಾಳ್ ಪುತ್ರ ಮಲ್ಲಿಕಾರ್ಜುನ ನಾಳೆ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಕಳೆದ ವರ್ಷ ವಿಧಾನಸಭೆ ಚುನಾವಣೆಗೂ ಮುನ್ನ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದು ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಪುತ್ರ ಮಲ್ಲಿಕಾರ್ಜನ್ ವಿಧಾನಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದರೂ, ಅವರಿಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ.
ಬಿಜೆಪಿಯ ವಿರುದ್ಧ ಸಿಡಿದೆದ್ದಿದ್ದಂತ ಅವರು, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸೋದಕ್ಕೆ ಸಿದ್ಧತೆ ನಡೆಸಿದ್ದರು. ಆಗ ಬಿಜೆಪಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಪಕ್ಷದಿಂದ ಉಚ್ಚಾಟಿಸಿತ್ತು.
ಇದರ ನಡುವೆ ಕಳೆದ ವರ್ಷ ಡಿಸೆಂಬರ್ ನಲ್ಲಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಪ್ರಕ್ರಿಯೆ ಪಾಲಿಸಿಲ್ಲ ಎಂದು ತಿಳಿಸಿತ್ತು.
BREAKING: ‘ಭಾರತೀಯ ಪ್ರವಾಸಿಗ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಇರಾನ್’ಗೆ ಪ್ರಯಾಣಿಸಲು ‘ವೀಸಾ’ ಅಗತ್ಯವಿಲ್ಲ