ಮಂಡ್ಯ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ನವೆಂಬರ್ ಅಂತ್ಯದ ವೇಳೆಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
BIGG NEWS: PSI ನೇಮಕಾತಿ ಅಕ್ರಮ ಕೇಸ್; ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ ಅರೆಸ್ಟ್
ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ. ಎಕ್ಸ್ಪೆನ್ಷನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ. ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ.
BIGG NEWS: PSI ನೇಮಕಾತಿ ಅಕ್ರಮ ಕೇಸ್; ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ ಅರೆಸ್ಟ್
ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬಹುದು. ಕೆಲವೆಡೆ ಕೆನಾಲ್, ಅಂಡರ್ ಪಾಸ್ನ ಸಣ್ಣ ಪುಟ್ಟ ಕೆಲಸವಿದೆ, ಆ ಕೆಲಸದ ಬಳಿ ಟ್ರಾಫಿಕ್ ಡೈವರ್ಟ್ ಮಾಡಿ, ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೇಸ್ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ.