ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು, ಗಲಾಟೆಯಾಗಿತ್ತು. ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ತಲೆದಂಡವಾಗಿದೆ. ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮದ್ದೂರು ಗಲಭೆ ಪ್ರಕರಣದಲ್ಲಿ ಎಎಸ್ಪಿ ವರ್ಗಾವಣೆ ವಿಚಾರವಾಗಿ ಮಾತನಾಡಿ ಅವರ ಅವಧಿ ಮುಗಿದಿತ್ತು. ಡಿಸೆಂಬರ್ ವರೆಗೂ ಮುಂದುವರೆಸಲು ಹೇಳಿದ್ದೆ. ಎಎಸ್ಪಿ ವರ್ಗಾವಣೆಗೂ ಮದ್ದೂರು ಪ್ರಕರಣಕ್ಕೂ ಸಂಬಂಧ ಇಲ್ಲ. ಸಾಮಾನ್ಯ ವರ್ಗಾವಣೆಯಂತೆ ವರ್ಗವಾಗಿದೆ. ತಿಮ್ಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಸಹಜ. ನೂರಕ್ಕೆ ಲಕ್ಷ ಪರ್ಸೆಂಟ್ ಮದ್ದೂರು ಗಲಾಟೆಗೂ ವರ್ಗಾವಣೆಗೂ ಸಂಬಂಧ ಇಲ್ಲ ಎಂದರು.
ಈ ಘಟನೆಗೆ ಪೊಲೀಸ್ ವೈಫಲ್ಯ ಕಾರಣ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು ಇನ್ನು ವರದಿ ಬಂದಿಲ್ಲ. ವರದಿ ಬಂದ ನಂತರ ಆ ಬಗ್ಗೆ ಮಾಹಿತಿ ನೀಡುವೆ. ಘಟನೆ ಸಂಬಂಧ ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಮದ್ದೂರು ಟೌನ್ ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ. ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದ ಕಾರಣಕ್ಕೆ ಇನ್ಸ್ ಪೆಕ್ಟರ್ ಸಸ್ಪೆಂಡ್ ಮಾಡಲಾಗಿದತೆ. ಶಾಂತಿ ಸಭೆಯಲ್ಲೇ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಹೆಚ್ಚಿನ ಗಮನಹರಿಸಿ ಬಂದೋಬಸ್ತ್ ಮಾಡುವಂತೆ. ಇನ್ಮುಂದೆ ಇಂತಹ ಯಾವುದೇ ಇಂತಹ ಘಟನೆ ನಡೆಯಬಾರದು. ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುವುದಾಗಿ ವಾರ್ನಿಂಗ್. ಡಿಸಿ, ಎಸ್ಪಿಗೆ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.
ಕಲ್ಲು ತೂರಾಟ ನಡೆಸಿದ 22 ಜನರನ್ನ ಬಂಧಿಸಲಾಗಿದೆ. ಘಟನೆಗೆ ಕಾರಣ ಏನು? ಯಾರು ಕಾರಣ ಅನ್ನೋ ಬಗ್ಗೆ ಇನ್ನು ವರದಿ ಬಂದಿಲ್ಲ. ಮೊನ್ನೆ ಬಿಜೆಪಿ ನಾಯಕರು ಬಂದಿದ್ದರು, ನಿನ್ನೆ ಬಿಜೆಪಿಯ ಪರ್ಯಾಯ ನಾಯಕರು ಬಂದಿದ್ರು. ಅವರ ಹೋರಾಟ ಯಶಸ್ವಿಯಾಗಿದೆ ಎಂದು ವ್ಯಂಗ್ಯವಾಡಿದರು.
ಘಟನಾ ಸ್ಥಳಕ್ಕೆ ಗೃಹ ಸಚಿವರು ಬಾರದ ವಿಚಾರ ಮಾತನಾಡಿ ಗೃಹ ಸಚಿವರು ನನ್ನಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಾನು ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ. ನಿನ್ನೆ ಕ್ಯಾಬಿನೆಟ್ ನಲ್ಲೂ ಚರ್ಚೆ ಆಗಿ, ಘಟನೆಯ ಮಾಹಿತಿ ವಿವರಿಸಿದ್ದೇನೆ. ನಾವು, ಜಿಲ್ಲಾಡಳಿತ ಸಮರ್ಥವಾಗಿ ನಿರ್ವಹಿಸುತ್ತಿದ್ದೇವೆ. ಗೃಹ ಸಚಿವರು ಬರುವ ಅವಶ್ಯಕತೆಯಿಲ್ಲ. ನಾನೇ ಬರೋದು ಬೇಡ ಅಂತಾ ಹೇಳಿದ್ದೇನೆ. ಯತ್ನಾಳ್ ಯಾವ ಪಾರ್ಟಿ ಅನ್ನೋದನ್ನ ಸ್ಪಷ್ಟಪಡಿಸಲಿ. ಯತ್ನಾಳ್ ಹೊಸ ಪಕ್ಷಕ್ಕೆ ನಮ್ಮದು ಶುಭ ಹಾರೈಕೆ ಎಂದರು.
ವರದಿ; ಗಿರೀಶ್ ರಾಜ್, ಮಂಡ್ಯ