Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ
KARNATAKA

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

By ವಸಂತ ಬಿ ಈಶ್ವರಗೆರೆ

ಮಂಡ್ಯ : ಕೆ.ಎಂ.ಉದಯ್ ಅವರು ಸಮೂಜಮುಖಿ ಕೆಲಸಗಳ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಮುಂದೆಯೂ ಶಾಸಕರಾಗಿ ಆಯ್ಕೆಯಾಗಿ ಸಚಿವ ಸ್ಥಾನವನ್ನು ಅಲಂಕರಿಸಲಿ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಮದ್ದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಕೆ.ಎಂ.ಉದಯ್ ಅವರ 52 ನೇ ಹುಟ್ಟುಹಬ್ಬದ ಅಂಗವಾಗಿ ಸೋಮವಾರ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳಿಗ್ಗೆಯೇ ನಗರದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ ಕೆ.ಎಂ.ಉದಯ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಹಮ್ಮಿಕೊಂಡು ಭಕ್ತಾಧಿಗಳಿಗೆ ಪ್ರಸಾದ ಹಾಗೂ ಸಿಹಿ ವಿತರಣೆ ಮಾಡಲಾಯಿತು.

ಬಳಿಕ ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ವಿವಿಧ ವಿಭಾಗಗಳ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬಾದಾಯಿ ಹಾಲು ವಿತರಿಸಲಾಯಿತು. ತಾಲೂಕಿನ ನಿಡಘಟ್ಟದಲ್ಲಿರುವ ಶ್ರೀ ಗುರುದತ್ತ ಆಶ್ರಮ ಬಾಲಕರ ಬಾಲ ಮಂದಿರದ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಬಾದಾಮಿ ವಿತರಣೆ ಸೇರಿದಂತೆ ಇನ್ನಿತರ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಾಗೂ ಕೆ.ಎಂ.ದೊಡ್ಡಿಯ ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ನವ ಮದ್ದೂರು ನಿರ್ಮಾಣದ ಕನಸುಗಾರರಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ. ಶಾಸಕರಾದ ಮೂರೇ ವರ್ಷದಲ್ಲಿ 2 ಸಾವಿರ ಕೋಟಿಗೂ ಅಧಿಕ ಅನುದಾನ ತಂದು ತಾಲೂಕಿನಲ್ಲಿ ಅಭಿವೃದ್ಧಿ ಪರ್ವ ಆರಂಭಿಸಿರುವುದನ್ನು ಕ್ಷೇತ್ರದ ಜನತೆ ನೋಡುತ್ತಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ನಿರೀಕ್ಷೆಗೂ ಮೀರಿ ಅನುದಾನ ತಂದು ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಮಾಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರ ಹುಟ್ಟು ಹಬ್ಬದ ಅಂಗವಾಗಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ದೇವರು ಅವರಿಗೆ ಆಯಸ್ಸು, ಆರೋಗ್ಯ, ಐಶ್ವರ್ಯ ಹಾಗೂ ರಾಜಕೀಯದಲ್ಲಿ ಉನ್ನತ ಸ್ಥಾನ, ಮಾನಗಳನ್ನು ಕಲ್ಪಿಸಲಿ ಎಂದು ಹಾರೈಸಿದರು.

ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಗಳಾದ ಕೆ.ಎಂ.ರವಿ, ಸಿಪಾಯಿ ಶ್ರೀನಿವಾಸ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಾಜಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಮಾಜಿ ಸದಸ್ಯರಾದ ಸರ್ವಮಂಗಳ, ಬಸವರಾಜು, ಸಿದ್ದರಾಜು, ಗ್ರಾಪಂ ಮಾಜಿ ಅಧ್ಯಕ್ಷ ತಿಮ್ಮೇಗೌಡ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಮಮತಾ ಶಂಕರೇಗೌಡ, ತಾ.ಪಂ ಮಾಜಿ ಅಧ್ಯಕ್ಷ ನಾಗೇಗೌಡ, ಮುಖಂಡರಾದ ದೇಶಹಳ್ಳಿ ಮೋಹನ್ ಕುಮಾರ್, ಅಜ್ಜಹಳ್ಳಿ ರಾಮಕೃಷ್ಣ, ಮಹದೇವಯ್ಯ, ಶರತ್, ಮನು, ಹೊಂಬಯ್ಯ, ದೊರೆಸ್ವಾಮಿ, ಫೈರೋಜ್, ಆರೀಫ್, ಹರೀಶ್ ರಾಜೇಶ್, ಯತೀಶ್ ಸೇರಿದಂತೆ ಇತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

2 Mins Read

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

2 Mins Read

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ನಾಗರಾಜ್ ಕಲ್ಮನೆ ಒತ್ತಾಯ

2 Mins Read
Recent News

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ನಾಗರಾಜ್ ಕಲ್ಮನೆ ಒತ್ತಾಯ

State News
KARNATAKA

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ವಿಶ್ವ ಹಾಲು ದಿನಾಚರಣೆ ಅಂಗವಾಗಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ ಮುಲ್) ಮದ್ದೂರು ಉಪ ಕಛೇರಿ…

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ನಾಗರಾಜ್ ಕಲ್ಮನೆ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.