ಮಂಡ್ಯ : ಮದ್ದೂರು ನಗರದ ಪ್ರವಾಸಿ ಮಂದಿರದ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮಂಗಳವಾರ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸೂಚನೆ ಬೆನ್ನಲ್ಲೆ ಮದ್ದೂರು ಶಾಸಕ ಕೆ.ಎಂ.ಉದಯ್ ಅವರು ಶನಿವಾರ ಸಾರ್ವಜನಿಕರ ಸಭೆಯನ್ನು ಆಯೋಜಿಸಿದ್ದಾರೆ.
ಡಿಸೆಂಬರ್ 6 ಶನಿವಾರದಂದು ಮಧ್ಯಾಹ್ನ 3.30 ಗಂಟೆಗೆ ಮದ್ದೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸಭೆ ಕರೆಯಲಾಗಿದ್ದು, ಸಭೆಗೆ ಮದ್ದೂರು ಪೇಟೆಬೀದಿಯ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡಗಳ ಮಾಲೀಕರು, ನಗರದ ನಾಗರೀಕರು, ಜನಪ್ರತಿನಿಧಿಗಳು ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದ ಆಸಕ್ತ ಸಾರ್ವಜನಿಕರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಶಾಸಕ ಕೆ.ಎಂ.ಉದಯ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ: ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ
BREAKING: ಕಾವೇರಿ ನದಿ ತೀರ ಒತ್ತುವರಿ ತೆರವಿಗೆ ಉಪ ಲೋಕಾಯುಕ್ತ ನ್ಯಾ.ವೀರಪ್ಪ ಆದೇಶ








