ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರಸ್ ನ ( Karnataka Pradesha Congress Committee – KPCC ) ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ಮಧು ಬಂಗಾರಪ್ಪ ( Madhu Bangarappa ) ಅವರನ್ನು ನೇಮಕ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾಗಿದ್ದಂತ ಎಂ.ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಈ ಬೆನ್ನಲ್ಲೇ, ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಸೊರಬ ಕ್ಷೇತ್ರದ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ಎಐಸಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಸೋನಿಯಾ ಗಾಂಧಿಯವರ ಸೂಚನೆಯ ಮೇರೆಗೆ ಮಧು ಬಂಗಾರಪ್ಪ ಅವರನ್ನು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.

ಮಧು ಬಂಗಾರಪ್ಪ ಅವರನ್ನು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ, ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅಭಿನಂದನೆಯನ್ನು ತಿಳಿಸಿದ್ದಾರೆ.

Share.
Exit mobile version