ಮಧ್ಯಪ್ರದೇಶ: ಇಲ್ಲಿನ ಜಬಲಪುರದಲ್ಲಿರುವಂತ ಆಸ್ಪತ್ರೆಯೊಂದರಲ್ಲಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ 10 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಮಧ್ಯಪ್ರದೇಶದ ಜಬಲಪುರದಲ್ಲಿರುವಂತ ನ್ಯೂ ಲೈಫ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಇಂದು ಸಂಭವಿಸಿದೆ. ಆಸ್ಪತ್ರೆಯಲ್ಲಿ ಹೊತ್ತಿ ಕೊಂಡಂತ ಬೆಂಕಿಯಲ್ಲಿ 10 ಜನರು ಸಜೀವವಾಗಿ ದಹನವಾಗಿರೋದಾಗಿ ತಿಳಿದು ಬಂದಿದೆ.
ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿಯನ್ನು ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಅವಘಡದಲ್ಲಿ ಸಿಲುಕಿ ಗಾಯಗೊಂಡಿರುವಂತ ಹಲವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.