ಮಡಿಕೇರಿ: ಜಿಲ್ಲೆಯ ಕಲಾವಿದರು ಅಥವಾ ಕಲಾ ತಂಡಗಳಿಗೆ ಗುರುತಿನ ಚೀಟಿಯನ್ನು ನೀಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅದರಂತೆ, ಕೊಡಗು ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾವಾರು ಕಲಾವಿದರ ವಿವರಗಳನ್ನು ಕ್ರೋಢೀಕರಿಸುವ ದೃಷ್ಟಿಯಿಂದ ಕಲಾವಿದರು ಅಥವಾ ಕಲಾ ತಂಡಗಳ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಕೇಂದ್ರ ಕಚೇರಿಗೆ ಸಲ್ಲಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಆಸಕ್ತ ಕಲಾವಿದರು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಡಿಕೇರಿ ಈ ಕಚೇರಿಯಿಂದ ನಿಗಧಿತ ನಮೂನೆ ಪಡೆದು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಜೂನ್, 30 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.