ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ಹರಿಪ್ರಸಾದ್ ಹಾಗೂ ಅಜಯನಿಗೆ ಜೀವಾವಧಿ ಶಿಕ್ಷೆ ನೀಡಿ ಕೊಡಗು ಜಿಲ್ಲಾ 1ನೇ ಹೆಚ್ಚುವರಿ ಸೆಷನ್ ಕೋರ್ಟ್ ತೀರ್ಪು ನೀಡಿದೆ.ಅಪರಾಧಿಗಳಿಗೆ ಜಡ್ಜ್ ಪ್ರಶಾಂತಿ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದಾರೆ.
2019ರ ಮಾರ್ಚ್ 19 ರಂದು ತಾಳತ್ಮನೆ ಎಂಬಲ್ಲಿ ಈ ಒಂದು ಕೊಲೆ ನಡೆದಿತ್ತು. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ಮನೆ ಪ್ರದೇಶದಲ್ಲಿ ಈ ಒಂದು ಹತ್ಯೆ ನಡೆದಿತ್ತು. ಲಾರಿ ಅಪಘಾತ ಮಾಡಿ ಬಾಲಚಂದ್ರ ಕಳಗಿ ಅವರನ್ನು ಕೊಲೆ ಮಾಡಿದ್ದರು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.