ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ತಾಲ್ಲೂಕು ಆಡಳಿತ, ಕುಶಾಲನಗರ ತಾಲ್ಲೂಕು ಪಂಚಾಯತ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ನೂತನ ಡಯಾಲಿಸಿಸ್ ಘಟಕ ಉದ್ಘಾಟನಾ ಕಾರ್ಯಕ್ರಮವು ಜೂನ್, 24 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ||ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ಪುರಸಭೆಯ ಆಡಳಿತಾಧಿಕಾರಿ ವಿನಾಯಕ ನರ್ವಾಡೆ, ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಕುಶಾಲನಗರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.