ಮಡಿಕೇರಿ : ಮಡಿಕೇರಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63) ಮೃತಪಟ್ಟವರು ಎಂದು ತಿಳಿದುಬಂದಿದೆ.ರೈತ ಸಹಕಾರ ಭವನದ ಬಳಿ 11 ಕೆವಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ.ಇದನ್ನು ಗಮನಿಸಿದೆ ತುಳಿದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಕೆಇಬಿ ಇಂಜಿನಿಯರ್ ಸಿಬ್ಬಂದಿಗಳು ಭೇಟಿ ಪರಿಹಾರದ ಭರವಸೆ ನೀಡಿದ್ದಾರೆ.