ಮಡಿಕೇರಿ : ಮೂರ್ನಾಡು 33/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್.ಎಸ್ ಹೊದ್ದೂರು ಮತ್ತು ಎಫ್2 ನಾಪೋಕ್ಲು ಫೀಡರ್‍ನಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಹೊದ್ದೂರು, ಕಬಡಗೇರಿ, ಕುಂಬಳದಾಳು, ಕಕ್ಕಬೆ, ಕೊಳಕೇರಿ, ಕುಂಜಿಲ, ಯುವಕಪಾಡಿ, ನಾಲಡಿ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ಕಿಯಲಕೇರಿ, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಬೇತು, ಚೆರಿಯಪರಂಬು, ಹಳೆತಾಲ್ಲೂಕು, ಚೋನೆಕೆರೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ನಾಳೆ ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಜನ ಸಂಪರ್ಕ ಸಭೆ
ಮಡಿಕೇರಿ : ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಡಿಸೆಂಬರ್, 10 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಚಾ.ವಿ.ಸ.ನಿ.ನಿ.,ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 10 ರಂದು ಮಧ್ಯಾಹ್ನ 2.30 ಗಂಟೆಯಿಂದ 3.30 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಚಾ.ವಿ.ಸ.ನಿ.ನಿ., ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.