ಮಡಿಕೇರಿ: ಜಿಲ್ಲೆಯಲ್ಲಿ ಎಡಬಿಡದೇ ಭಾರೀ ಮಳೆಯಾಗುತ್ತಿದೆ. ಈ ಮಳೆಯ ನಡುವೆಯೂ ಪ್ರವಾಸಿಗರ ಭೇಟಿ ಹೆಚ್ಚಿದೆ. ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಎಂಬಲ್ಲಿ ಲಾರಿ ಹಾಗೂ ಕಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವನ್ನಪ್ಪಿದವರ ಬಗ್ಗೆ ಮಾಹಿತಿ ತಿಳಿಯಬೇಕಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಥೈಲ್ಯಾಂಡ್‌ನಲ್ಲಿರುವ ಭಾರತೀಯರಿಗೆ ಈ ಪ್ರಯಾಣ ಸಲಹೆ ಮಾಡಿದ ರಾಯಭಾರ ಕಚೇರಿ | Thailand-Cambodia Border dispute