ಬೆಂಗಳೂರು : ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದರಿಂದ ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದೀಗ ಮೃತ ದೇಹವನ್ನು ಹೊರಗೆ ತೆಗೆಯಲಾಗಿದ್ದು ಇನ್ನು ಪರ್ಪಲ್​ ಲೈನ್​ನ ಮಾಗಡಿ ರಸ್ತೆಯಿಂದ ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು,ಮುಂಬೈ ಮೂಲದ ಧ್ರುವ್ ಟಕ್ಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ಪ್ರಕರಣ ಸಂಬಂಧ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿತ್ತು. ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇತ್ತು.

ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದರು.ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಎಸ್ ಎಸ್ ಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇದೀಗ ಮೃತ ದೇಹವನ್ನು ಹಳಿಯಿಂದ ಹೊರ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಸ್ಥಗಿತಗೊಂಡಿದ್ದ ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.

Share.
Exit mobile version