ಬೆಂಗಳೂರು: ರಾಜ್ಯ ಸರ್ಕಾರವು ಸೂಪರಿಡೆಂಟ್ ಆಫ್ ಪೊಲೀಸ್ ಹಾಗೂ ಮೇಲ್ಪಟ್ಟ ಶ್ರೇಣಿಯ ಅಧಿಕಾರಿಗಳಿಗೆ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ನೀಡಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎಸ್ ಪಿ ಹಾಗೂ ಮೇಲ್ಪಟ್ಟ ಶ್ರೇಣಿಯ ಅಧಿಕಾರಿಗಳಿಗೆ ಕಾರ್ಯ ನಿರ್ವಾಹಕ ಮ್ಯಾಜಿಸ್ಟ್ರೇಟ್ ಅಧಿಕಾರ ನೀಡಿರುವುದಾಗಿ ತಿಳಿಸಿದೆ.
ವಿಶೇಷ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಬಳಕೆ ಮಾಡುವಂತೆಯೂ ಆದೇಶದಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ.
ನಿಷೇಧಾಜ್ಞೆ, ಆರೋಪಿಗಳಿಗೆ ಬಾಂಡ್ ಸೇರಿ ವಿಶೇಷ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಬಳಸಿಕೊಳ್ಳುವುದಕ್ಕೆ ಅನುಕೂಲವಾಗಲಿದೆ.
BIG NEWS: ನ.24ರಂದು ‘KUWJ ರಾಜ್ಯ ಮಟ್ಟದ ಪದಾಧಿಕಾರಿ’ಗಳು ಅಧಿಕಾರ ಸ್ವೀಕಾರ ಸಮಾರಂಭ ನಿಗದಿ
ಇಂದಿನಿಂದ ದೇಶಾದ್ಯಂತ ನೂತನ ಕಾರ್ಮಿಕ ಸಂಹಿತೆಗಳು ಜಾರಿ: ಅನುಕೂಲಗಳೇನು? ಇಲ್ಲಿದೆ ಮಾಹಿತಿ | Four New Labour Codes








