ಪುಣೆ: ಪುಣೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಆಯೋಜಿಸಿದ್ದ ಪ್ರತಿಭಟನೆಯಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೂಗಿರುವ ಆಘಾತಕಾರಿ ವಿಡಿಯೋ ವೈರಲ್ ಆಗುತ್ತಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಪಿಎಫ್ಐ ಸಂಘಟನೆಯ ಮೇಲೆ ಇತ್ತೀಚೆಗೆ ರಾಷ್ಟ್ರವ್ಯಾಪಿ ದಾಳಿ ನಡೆಸಿ ಕೆಲವು ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ PFI ಕಾರ್ಯಕರ್ತರನ್ನು ಪೊಲೀಸ್ ವ್ಯಾನ್ಗೆ ಕರೆದೊಯ್ಯುವಾಗ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಕೂಗು ಕೇಳಿಬಂದಿದೆ.
#WATCH | Maharashtra: ‘Pakistan Zindabad’ slogans were heard outside the District Collector’s office yesterday in Pune City where PFI cadres gathered against the recent ED-CBI-Police raids against their outfit. Some cadres were detained by Police; they were arrested this morning. pic.twitter.com/XWEx2utZZm
— ANI (@ANI) September 24, 2022
ಪುಣೆಯ ಜಿಲ್ಲಾಧಿಕಾರಿ ಕಚೇರಿ ಎದುರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಿಎಫ್ಐ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಕೆಲವೇ ಗಂಟೆಗಳಲ್ಲಿ ಈ ವಿಚಾರವಾಗಿ ರಾಜಕೀಯ ವಲಯದಲ್ಲಿ ವ್ಯಾಪಕ ಕೋಲಾಹಲ ಎದ್ದಿದೆ. ಪುಣೆಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುವವರ ವಿರುದ್ಧ ಕಠಿಣ ಕ್ರಮಕ್ಕೆ ವಿರೋಧ ಪಕ್ಷದ ನಾಯಕರು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
BIGG BREAKING NEWS : ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ : ರೋಗಿಗಳ ಪರದಾಟ
BIGG NEWS : ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಮಕ್ಕಳ ಕಳ್ಳರ ವದಂತಿ : ದೊಡ್ಡಬಳ್ಳಾಪುರದಲ್ಲಿ ಮಹಿಳೆ ಮೇಲೆ ಹಲ್ಲೆ