ಹುಬ್ಬಳ್ಳಿ : ರಾಜ್ಯಕ್ಕೆ ಒಂದು ವರ್ಷದಲ್ಲಿ ಮಹದಾಯಿ ನೀರು ಬರಲಿದೆ. ಮಹದಾಯಿ ಯೋಜನೆಯ ಕೆಲಸಗಳು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
BIGG NEWS : `ನನ್ನ ನಾಡು ನನ್ನ ಹಾಡು’ : `ಕೋಟಿ ಕಂಠ ಗಾಯನ’ದಲ್ಲಿ ಭಾಗವಹಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಕೆಲಸ ನಡೆಯುತ್ತಿದ್ದು, ಹೆಚ್ಚು ಅರಣ್ಯ ನಾಶವಾಗದಂತೆ ತಂತ್ರಜ್ಞಾನ ಬಳಸಿ ಕೆಲಸ ಮಾಡಲಾಗುತ್ತಿದೆ. ಸಚಿವ ಗೋವಿಂದ ಕಾರಜೋಳ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಶೀಘ್ರವೇ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವುದಾಗಿ ಹೇಳಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್ ಬಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.