ನವದೆಹಲಿ:ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಾದಲ್ಪುರ ಪೊಲೀಸ್ ಠಾಣೆ ಪ್ರದೇಶದ ಸರೋಖಾನ್ಪುರದಲ್ಲಿ ಈ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯ ಚುರುಕುಗೊಂಡಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.