ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸಿದಂತ ಬೆಂಗಳೂರಿನ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಲಕ್ಷ್ಮಿ ಕೊಲೆ ಪ್ರಕರಣದಲ್ಲಿ ಒಂದಷ್ಟು ಮಾಹಿತಿಗಳನ್ನು ಕಲೆ ಹಾಕಿದ್ದೇವೆ. ಪ್ರಕರಣದಲ್ಲಿ ಒಬ್ಬನಿದ್ದಾನೋ, ಇಬ್ಬರಿದ್ದಾರೋ ನೋಡಬೇಕು. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನ ನಗರದ ವೈಯಾಲಿಕಾವಲ್ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.